ಬೆಂಗಳೂರು, ಜು 23 (DaijiworldNews/PY): ರಾಜ್ಯದಲ್ಲಿ ಶಾಲೆ ಪ್ರಾರಂಭವಾಗುವವರೆಗೆ ಎಲ್ಕೆಜಿಯಿಂದ 10ನೇ ತರಗತಿವರೆಗೆ ಆನ್ಲೈನ್ ತರಗತಿ ನಡೆಸಲು ಕರ್ನಾಟಕ ಹೈಕೋರ್ಟ್ ಸೂಚಿಸಿದೆ.
ರಾಜ್ಯದಲ್ಲಿ ಎಲ್ಕೆಜಿಯಿಂದ 10ನೇ ತರಗತಿವರೆಗೆ ಆನ್ಲೈನ್ ಶಿಕ್ಷಣ ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಿಸಿದೆ. ಈ ಹಿನ್ನೆಲೆ ಶಾಲೆ ಪ್ರಾರಂಭವಾಗುವವರೆಗೆ ಆನ್ಲೈನ್ ತರಗತಿ ನಡೆಸಲು ಕರ್ನಾಟಕ ಹೈಕೋರ್ಟ್ ಸೂಚಿಸಿದೆ.
ಮಧ್ಯಂತರ ತಡೆಯಾಜ್ಞೆ ಆದೇಶವನ್ನು ನ್ಯಾ. ನಾಗರತ್ನ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಸ್ತರಿಸಿದೆ. "ರಾಜ್ಯದಲ್ಲಿ ಎಲ್ಕೆಜಿಯಿಂದ 10ನೇ ತರಗತಿವರೆಗೆ ಆನ್ಲೈನ್ ಶಿಕ್ಷಣ ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ಜುಲೈ 2020ರ ಜುಲೈ 8ರಂದು ನೀಡಿರುವ ಮಧ್ಯಂತರ ತಡೆಯಾಜ್ಞೆ ಇನ್ನೂ ಚಾಲ್ತಿಯಲ್ಲಿದೆ" ಎಂದು ಅರ್ಜಿದಾರರ ಹಾಗೂ ಸರ್ಕಾರದ ಪರ ವಕೀಲರು ತಿಳಿಸಿದ್ದಾರೆ.