ಚಂಡೀಗಢ, ಜು.23 (DaijiworldNews/HR): ಪಂಜಾಬ್ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷರಾಗಿ ನವಜೋತ್ ಸಿಂಗ್ ಸಿಧು ಆಯ್ಕೆಯಾಗಿದ್ದು, ಇಂದು ಅವರ ಪದಗ್ರಹಣ ಸಮಾರಂಭ ನಡೆಯುತ್ತಿದ್ದು, ಈ ಸಮಾರಂಭಕ್ಕೆ ತೆರಳುತ್ತಿದ್ದಾಗ ಮೊಗಾದ ಲೋಕರಾ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಎರಡು ಬಸ್ಗಳ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿದ್ದು, ಐವರು ಸ್ಥಳದಲ್ಲೇ ಮೃತಪಟ್ಟು 15 ಕ್ಕೂ ಅಧಿಕ ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಈ ಘಟನೆಯಲ್ಲಿ ಗಾಯಗೊಂಡವರರಲ್ಲಿ ಹೆಚ್ಚಿನವರನ್ನು ಕಾಂಗ್ರೆಸ್ ಕಾರ್ಯಕರ್ತರರಾಗಿದ್ದು, ಅವರನ್ನು ಮೋಗಾದ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿಂದ ಗಂಭೀರವಾಗಿ ಗಾಯಗೊಂಡ ಮೂವರನ್ನು ಫರೀದ್ ಕೋಟ್ ನ ಗುರು ಗೋವಿಂದಸಿಂಗ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಯುತ್ತಿದೆ.