ಮುಂಬೈ,ಜು.23 (DaijiworldNews/HR): ಪೋರ್ನ್ ಸಿನಿಮಾಗಳನ್ನು ಮಾಡಿ ಅದನ್ನು ಬೇರೆ ಬೇರೆ ಆಪ್ ಗಳಲ್ಲಿ ಆಪ್ ಲೋಡ್ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತನಾಗಿರುವ ಖ್ಯಾತ ನಟಿ ಶಿಲ್ಪಾ ಶಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾ ಅವರ ಪೊಲೀಸ್ ಕಸ್ಟಡಿ ಅವಧಿಯನ್ನು ಮುಂಬೈ ಕೋರ್ಟ್ ಜುಲೈ 27ರ ವರೆಗೆ ವಿಸ್ತರಿಸಿದೆ.
ಜುಲೈ 19 ರ ರಾತ್ರಿ ನಗರ ಅಪರಾಧ ವಿಭಾಗದ ಪೊಲೀಸರು ಕುಂದ್ರಾ ಅವರನ್ನು ಬಂಧಿಸಿದ್ದು, ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಕೇಸ್ ದಾಖಲಿಸಲಾಗಿದೆ.
ಇನ್ನು ಕುಂದ್ರಾ ಅವರು ಅಶ್ಲೀಲ ಚಿತ್ರಗಳನ್ನು ತಯಾರಿಸುವುದು ಮತ್ತು ಮಾರಾಟ ಮಾಡುವ ಅಕ್ರಮ ಚಟುವಟಿಕೆಯಿಂದ ಆರ್ಥಿಕ ಲಾಭ ಗಳಿಸುತ್ತಿದ್ದಾರೆ ಎಂದು ಪೊಲೀಸರು ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿದ್ದರು.
ಇದೇ ಪ್ರಕರಣಕ್ಕೆ ಸಂಬಂಧಿಸಿ ರಿಯಾನ್ ಥಾರ್ಪ್ ಎಂಬಾತನನ್ನು ಬಂಧಿಸಲಾಗಿದ್ದು, ಈತ ಥಾರ್ಪ್ ಆಪ್ ಕಂಪನಿಯಲ್ಲಿ ಉತ್ತಮ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.