ಮಂಗಳೂರು, ಜು. 23 (DaijiworldNews/SM): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮುನ್ನೆಲೆಗೆ ಬಂದ ಹಿನ್ನೆಲೆಯಲ್ಲಿ ಮಠಾಧೀಶರು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗುತ್ತಿದ್ದು, ಇದರ ವಿರುದ್ಧ ಮಾಜಿ ಸಿಎಂ ಹಾಗೂ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ.
ಮಠಾಧೀಶರು ಯಾವುದೇ ಕಾರಣಕ್ಕೂ ರಾಜಕೀಯದಲ್ಲಿ ಹಸ್ತಕ್ಷೇಪ ನಡೆಸಬಾರದು. ಇದರಲ್ಲಿ ಜನಭಿಪ್ರಾಯವೇ ಅಂತಿಮವಾಗಬೇಕು. ಮಠಾಧೀಶರು ರಾಜಕೀಯದಲ್ಲಿ ಹಸ್ತಕ್ಷೇಪ ನಡೆಸುವುದರಿಂದ ಜನರಿಗೆ ಇರುವ ನಂಬಿಕೆಗೆ ಧಕ್ಕೆಯುಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ರಾಜಕೀಯ ವಿಚಾರಗಳಲ್ಲಿ ಮಠಾಧೀಶರು ಕಾಣಿಸಿಕೊಳ್ಳಬಾರದು ಎಂದಿದ್ದಾರೆ.
ಇನ್ನು ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಿರುವಾಗ ಮಠಾಧೀಶರು ಸಿಎಂ ಅವರ ಬೆಂಬಲಕ್ಕೆ ನಿಂತಿದ್ದರು.