ಬೆಂಗಳೂರು, ಜು 24 (DaijiworldNews/PY): ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಮಳೆ ಹಾನಿ ಬ ಗ್ಗೆ ಪರಿಶೀಲನೆ ನಡೆಸಲಿದ್ದಾರೆ.
ಶನಿವಾರ ಬೆಳಗ್ಗೆ ಅತಿವೃಷ್ಟಿ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಕರೆ ಮಾಡಿದ್ದು, ಭಾರೀ ಮಳೆ ಉಂಟಾಗಿರುವ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಪಡೆದರು. ತಮ್ಮ ಉಸ್ತುವಾರಿ ಜಿಲ್ಲೆಯಲ್ಲಿ ಇರುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯಾದ್ಯಂತ ವರುಣ ಆರ್ಭಟ ಮುಂದುವರಿದಿದ್ದು, ಹಲವಡೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯ ಪರಿಣಾಮ ಭೂ ಕುಸಿತ, ಮನೆ ಕುಸಿತ, ರಸ್ತೆ ಸಂಪರ್ಕ ಕಡಿತಗೊಂಡಿವೆ.