ಕೊಪ್ಪಳ, ಜು 24 (DaijiworldNews/MS): ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂಬ ಸುದ್ದಿಯ ನಡುವೆ ಸಿಎಂ ಸ್ಥಾನಕ್ಕೆ ಹಲವರ ಹೆಸರು ಕೇಳಿಬರುತ್ತಿದೆ. ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು ಈಗಾಗಲೇ ಹಲವು ರೀತಿಯಲ್ಲಿ ಲಾಭಿ ಮಾಡತೊಡಗಿದ್ದಾರೆ. ಈ ನಡುವೆ ಪ್ರಣವಾನಂದ ಸ್ವಾಮೀಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಪರ ಬ್ಯಾಟಿಂಗ್ ಬೀಸಿದ್ದಾರೆ. ಸಿಎಂ ಯಡಿಯೂರಪ್ಪರನ್ನು ಬದಲಾವಣೆ ಮಾಡಿದರೆ ಕೋಟ ಶ್ರೀನಿವಾಸ ಪೂಜಾರಿಯನ್ನ ಸಿಎಂ ಮಾಡಬೇಕು ಎಂದು ಪ್ರಣವಾನಂದ ಶ್ರೀ ಹೇಳಿದ್ದಾರೆ.
ಚುನಾವಣೆ ಬಂದಾಗ ಮಾತ್ರ ನಮ್ಮ ಸಮಾಜ ನೆನಪಾಗುತ್ತದೆ. ಆರ್ಯ ಇಡೀಗ ಸಮಾಜಕ್ಕೆ ಸಾಕಷ್ಟು ಅನ್ಯಾಯವಾಗಿದೆ . ಉನ್ನತ ಹದ್ದೆಯಲ್ಲಿರುವ ಸಮಾಜದ ಪ್ರಮುಖರು ಅನ್ಯಾಯವನ್ನು ಪ್ರತಿಭಟಸದೇ ಮೌನವಾಗಿದ್ದಾರೆ. ಸರ್ಕಾರಇಲ್ಲಿವರೆಗೆ ನಮ್ಮ ಸಮಾಜಕ್ಕೆ ನಿಗಮ ಮಂಡಳಿ ಘೋಷಣೆ ಮಾಡಿಲ್ಲ. ಸಣ್ಣ ಸಣ್ಣ ಸಮಾಜಕ್ಕೆ ನಿಗಮ ಮಂಡಳಿ ಘೋಷಣೆ ಮಾಡಿದ್ದಾರೆ. ಕೂಡಲೇ ಸರ್ಕಾರ ಬ್ರಹ್ಮಶ್ರೀ ನಾರಾಯಣಸ್ವಾಮಿ ನಿಗಮ ಮಂಡಳಿ ಸ್ಥಾಪನೆ ಮಾಡಬೇಕು. ಹೀಗಾಗಿ ಮುಖ್ಯಮಂತ್ರಿ ಬದಲಾವಣೆಯಾದರೆ ಮುಖ್ಯಮಂತ್ರಿ ಸ್ಥಾನವನ್ನು ಕೋಟ ಶ್ರೀನಿವಾಸ ಪೂಜಾರಿಗೆ ಕೊಡಬೇಕು ಅಂತ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪ್ರಣವಾನಂದ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
ಈ ಬಗ್ಗೆ ಸರಿಯಾದ ಚಿಂತನೆ ಮಾಡಬೇಕಾಗಿದೆ. ಇದು ನಮ್ಮ ಸಮಾಜದ ಆಗ್ರಹವಾಈಗೆ ಇಲ್ಲವಾದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಸ್ವಾಮೀಜಿ ಎಚ್ಚರಿಕೆ ನೀಡಿದರು.