ಬೆಂಗಳೂರು, ಜು.24 (DaijiworldNews/HR): ಜಾರ್ಖಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಭಾರ ಕುಸಿತದ ಪ್ರಭಾವ ಹಾಗೂ ಕೇರಳ-ಕರ್ನಾಟಕದ ಕರಾವಳಿ ಪ್ರದೇಶದಲ್ಲಿನ ಕಡಿಮೆ ಒತ್ತಡದ ಕಾರಣದಿಂದಾಗಿ ಜುಲೈ.28ರವರೆಗೆ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗಲಿದೆ.
ಸಾಂಧರ್ಭಿಕ ಚಿತ್ರ
ಜುಲೈ.25ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಹವಮಾನ ಇಲಾಖೆ ಘೋಷಿಸಿದೆ.
ಈ ಕುರಿತು ಮಾಹಿತಿ ನೀಡಿದಂತ ಹವಮಾನ ಇಲಾಖೆಯ ನಿರ್ದೇಶಕ ಸಿಎಸ್ ಪಾಟೀಲ್ ಅವರು, ಶನಿವಾರ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಬಹುತೇಕ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮಂಚಿಕೇರಿಯಲ್ಲಿ 15 ಸೇ.ಮೀ ಮಳೆಯಾಗಿದ್ದು, ಶಿವಮೊಗ್ಗ ಜಿಲ್ಲೆಯ ತಾಳಗುಪ್ಪದಲ್ಲಿ 13 ಸೇ.ಮೀ ಮಳೆಯಾಗಿದೆ. ಬೆಳಗಾವಿ ಜಿಲ್ಲೆಯ ಸಂಕೇಶ್ವರ್ ದಲ್ಲಿ 11 ಸೇ.ಮೀ ಮಳೆಯಾಗಿದೆ ಎಂದರು.
ಇನ್ನು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ.24ರಂದು ಬಹುತೇಕ ಎಲ್ಲಾ ಕಡೆ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ.25ರಿಂದ ಜುಲೈ.28ರವರೆಗೆ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಜುಲೈ.25ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.