ಬೆಂಗಳೂರು,ಜು.24 (DaijiworldNews/HR): ಕರ್ನಾಟಕದಲ್ಲಿ ಶನಿವಾರ 1857 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ 29 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.
ಸಾಂಧರ್ಭಿಕ ಚಿತ್ರ
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳ ಅವಧಿಯಲ್ಲಿ 2050 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2833276ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ 23,905 ಸಕ್ರಿಯ ಪ್ರಕರಣಗಳು ಇದ್ದು, ಪಾಸಿಟಿವಿಟಿ ದರ ಶೇಕಡ 1.21 ರಷ್ಟು ಇದ್ದು, ಒಟ್ಟು ಸೋಂಕಿತರ ಸಂಖ್ಯೆ 28,93,556 ಕ್ಕೆ ಏರಿಕೆಯಾಗಿದೆ. ಇದುವರೆಗೆ 36 352 ಮಂದಿ ಸಾವನ್ನಪ್ಪಿದ್ದು, 28,33,276 ಜನ ಗುಣಮುಖರಾಗಿದ್ದಾರೆ.