ಶ್ರೀನಗರ, ಜು 25 (DaijiworldNews/PY): "ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಮುನಾಂದ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಓರ್ವ ಭಯೋತ್ಪಾದಕ ಸಾವನ್ನಪ್ಪಿದ್ದಾನೆ" ಎಂದು ಪೊಲೀಸರು ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
"ಮುನಾಂದ್ ಪ್ರದೇಶದಲ್ಲಿ ಹಲವು ಉಗ್ರರು ಅವಿತಿರುವ ಶಂಕೆ ಇದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ" ಎಂದು ಜಮ್ಮು-ಕಾಶ್ಮೀರ ಪೊಲೀಸರ ಹೇಳಿಕೆ ಉಲ್ಲೇಖಿಸಿ ಸುದ್ದಿಸಂಸ್ಥೆಯೊಂದು ಟ್ವೀಟ್ ಮಾಡಿದೆ.
ಎರಡು ದಿನಗಳ ಹಿಂದೆಯಷ್ಟೇ ಬಾರಾಮುಲ್ಲಾ ಜಿಲ್ಲೆಯ ಸೊಪೊರ್ ಪಟ್ಟಣ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯಲಾಗಿತ್ತು. ಶುಕ್ರವಾರ ಜಮ್ಮು-ಕಾಶ್ಮೀರ ಪೊಲೀಸರು ಜಮ್ಮು ಜಿಲ್ಲೆಯ ಅಂತರಾಷ್ಟ್ರೀಯ ಗಡಿ ಭಾಗದ ಸಮೀಪ ಹಾರಾಟ ನಡೆಸುತ್ತಿದ್ದ ಡ್ರೋನ್ ಅನ್ನು ಹೊಡೆದುರುಳಿಸಿದ್ದು, ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿತ್ತು.