ನವದೆಹಲಿ, ಜು 25 (DaijiworldNews/PY): ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ಬೆಳಗ್ಗೆ 11 ಗಂಟೆಗೆ ರೇಡಿಯೋ ಕಾರ್ಯಕ್ರಮ ಮನ್ ಕೀ ಬಾತ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದು ಮನ್ ಕೀ ಬಾತ್ನ 79ನೇ ಆವೃತ್ತಿಯಾಗಿದೆ.
ಇಂದಿನ ಮನ್ ಕೀ ಬಾತ್ ರೇಡಿಯೊ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಕೊರೊನಾ ವೈರಸ್ ಹಾಗೂ ಪ್ರಸ್ತುತ ನಡೆಯುತ್ತಿರುವ ಟೋಕಿಯೊ ಒಲಿಂಪಿಕ್ಸ್ ಬಗ್ಗೆ ದೇಶವನ್ನುದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ.
ಜೂನ್ 27ರಂದು ನಡೆದ ಮನ್ ಕೀ ಬಾತ್ ರೇಡಿಯೊ ಕಾರ್ಯಕ್ರಮದ 78ನೇ ಆವೃತ್ತಿಯಲ್ಲಿ, "ಟೋಕಿಯೊ ಒಲಿಂಪಿಕ್ಸ್ನಲ್ಲಿ ಪಾಲ್ಗೊಳ್ಳುವ ಆಟಗಾರರಿಗೆ ನಾಗರಿಕರು ಮುಕ್ತ ಮನಸ್ಸಿನಿಂದ ಪ್ರೋತ್ಸಾಹಿಸಬೇಕು" ಎಂದು ತಿಳಿಸಿದ್ದರು.