ಸುಕ್ಮಾ, ಜು 25 (DaijiworldNews/PY): "ಭಾನುವಾರ ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಓರ್ವ ನಕ್ಸಲ್ ಸಾವನ್ನಪ್ಪಿದ್ದಾನೆ" ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
"ಜಿಲ್ಲಾ ಮೀಸಲು ಪಡೆ ಹಾಗೂ ಕೇಂದ್ರ ಮೀಸಲು ಪೊಲೀಸ್ ಪಡೆ ಭಾನುವಾರ ಮುಂಜಾನೆ ಮಿನ್ಪಾ ಬಳಿಯಿರುವ ಅರಣ್ಯ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದು, ಈ ಸಂದರ್ಭ ಭದ್ರತಾ ಪಡೆಗಳ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ಏರ್ಪಟ್ಟಿದೆ" ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಶರ್ಮಾ ಹೇಳಿದ್ದಾರೆ.
"ಭದ್ರತಾ ಪಡೆ ಹಾಗೂ ನಕ್ಸಲರ ನಡುವೆ ಸುಮಾರು ಒಂದು ಗಂಟೆಗಳ ಕಾಲ ಗುಂಡಿನ ಕಾಳಗ ನಡೆದಿದ್ದು, ನಂತರ ನಕ್ಸಲರು ಅರಣ್ಯದೊಳಕ್ಕೆ ಓಡಿ ಹೋದರು. ಘಟನಾ ಸ್ಥಳದಲ್ಲಿ ರಕ್ತದ ಕಲೆ ಪತ್ತೆಯಾಗಿದ್ದು, ಒಂದಕ್ಕಿಂತ ಹೆಚ್ಚು ನಕ್ಸಲರು ಗಾಯಗೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ. ಸದ್ಯ ನಕ್ಸಲರಿಗಾಗಿ ಶೋಧ ಕಾರ್ಯ ಮುಂದುವರಿದಿದೆ" ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ.