ಬೆಂಗಳೂರು, ಜು 25 (DaijiworldNews/PY): "ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಕ್ಕೆ ಬಂದಾಗಿನಿಂದಲೂ ಅನಿಶ್ಚಿತತೆ ಎದುರಿಸುತ್ತಿದ್ದಾರೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಇಂದಿ ಸಂಜೆ ಸಿಎಂ ಯಡಿಯೂರಪ್ಪ ಅವರಿಗೆ ಹೈಕಮಾಂಡ್ನಿಂದ ಸಂದೇಶ ಬರುವ ವಿಚಾರದ ಬಗ್ಗೆ ಮಾತನಾಡಿದ ಅವರು, "ಸಿಎಂ ಬಿಎಸ್ವೈ ಅಧಿಕಾರಕ್ಕೆ ಬಂದಾಗಿನಿಂದ ರಾಜಕೀಯ ಅನಿಶ್ಚಿತತೆ ಎದುರಿಸುತ್ತಿದ್ದಾರೆ. ಇದು ಯಡಿಯೂರಪ್ಪ ಅವರ ಆಡಳಿತ ಜನತೆಗೆ ಕೊಟ್ಟ ಕೊಡುಗೆ" ಎಂದಿದ್ದಾರೆ.
ಈ ವೇಳೆ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿರುವ ಅವರು, "ಕಳೆದ ವರ್ಷ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಅಲ್ಲದೇ, ಕೊರೊನಾ ಸಂಕಷ್ಟಕ್ಕೊಳಗಾದವರಿಗೂ ಕೂಡಾ ನೆರವು ಸಿಕ್ಕಿಲ್ಲ. ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇಂತಹ ಸರ್ಕಾರ ಏಕೆ ಬೇಕು?" ಎಂದು ಕೇಳಿದ್ದಾರೆ.