ಬೆಳಗಾವಿ, ಜು.25 (DaijiworldNews/HR): "ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ರಾಜಕೀಯ ಬದಲಾವಣೆ ಇಲ್ಲ" ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಮುಖ್ಯಮಂತ್ರಿ ಬದಲಾವಣೆ ಚರ್ಚೆಗೆ ಸ್ಪಷ್ಟನೆ ನೀಡಿದ್ದಾರೆ.
ಗೋವಾಗೆ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಮಾತನಾಡಿ, "ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ರಾಜಕೀಯ ಬದಲಾವಣೆ ಇಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಬೆಳಗಾವಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದಾಗ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ "ಸಿಎಂ ಬದಲಾವಣೆ ಕುರಿತು ಹೈಕಮಾಂಡ್ ನಿಂದ ಈವರೆಗೂ ಯಾವುದೇ ಸಂದೇಶ ಬಂದಿಲ್ಲ. ಹೈಕಮಾಂಡ್ ಆದೇಶಕ್ಕಾಗಿ ಕಾಯುತ್ತಿದ್ದೇನೆ. ನಾಳೆ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ" ಎಂದು ಹೇಳಿದ್ದಾರೆ.