ಬೆಂಗಳೂರು, ಜು. 25 (DaijiworldNews/SM): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳಾಗುತ್ತಿದ್ದು, ಆದರೆ ಹೈಕಮಾಂಡ್ ನಿಂದ ಯಾವುದೇ ಸಂದೇಶ ಬಂದಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ರಾತ್ರಿ ಅಥವಾ ಸೋಮವಾರ ಸಂದೇಶ ಬರುವ ಸಾಧ್ಯತೆ ಇದೆ. ಹೈ ಕಮಾಂಡ್ ಯಾವ ಸೂಚನೆ ನೀಡುತ್ತದೆಯೋ ಅದನ್ನು ಪಾಲಿಸುತ್ತೇನೆ. ಆದರೆ, ಕೊನೆ ಕ್ಷಣದವರೆಗೂ ನಾನು ಕೆಲಸ ಮಾಡಿಕೊಂಡಿರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ನಾಳೆ ಸಾಧನಾ ಸಮಾವೇಶದಲ್ಲಿ ನಮ್ಮ ಸರ್ಕಾರದ ಸಾಧನೆ ಬಗ್ಗೆ ಮಾತನಾಡಲಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.