ಮುಂಬೈ, ಜು.26 (DaijiworldNews/HR): ಮಹಾರಾಷ್ಟ್ರದ ರಾಯಗಢ, ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಮೃತಪಟ್ಟವರ ಸಂಖ್ಯೆ 83ಕ್ಕೇರಿದ್ದು, 50 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ. ರಾಜ್ಯದಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಒಟ್ಟು 149 ಮಂದಿ ಸಾವನ್ನಪ್ಪಿದ್ದು, 64 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ರಾಯಗಢದ ತಲಿಯೆ ಗ್ರಾಮದಲ್ಲಿ ಭೀಕರ ಭೂಕುಸಿತ ಸಂಭವಿಸಿ ಅಲ್ಲಿ ಮೃತಪಟ್ಟವರ ಸಂಖ್ಯೆ 53ಕ್ಕೇರಿದ್ದು, 31 ಮಂದಿ ಇನ್ನೂ ಕಣ್ಮರೆಯಾಗಿದ್ದಾರೆ. 45 ಮನೆಗಳು ಸಂಪೂರ್ಣ ನಾಶವಾಗಿದ್ದು, ಉಳಿದುಕೊಂಡಿರುವ ಸಂತ್ರಸ್ತರಿಗೆ ಆಹಾರ, ನೀರು ಹಾಗೂ ವೈದ್ಯಕೀಯ ನೆರವು ಸಿಗುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಇನ್ನು ಪರಿಹಾರ ಕಾರ್ಯಾಚರಣೆ ನಡೆಯುತ್ತಿರುವುದಾಗಿ ಸರ್ಕಾರ ಹೇಳಿದ್ದು, ಎನ್ಡಿಆರ್ಎಫ್, ಎಸ್ಡಿಆರ್ಎಫ್, ಸೇನೆ, ನೌಕಾಪಡೆ ಮತ್ತು ಕರಾವಳಿ ಕಾವಲುಪಡೆ ತಂಡಗಳು ಸಂತ್ರಸ್ತ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿವೆ.
ಭೂಕುಸಿದ ಸಂಭಂವಿಸಿದ ಸತಹಳದಿಂದ ಇದುವರೆಗೆ 2.29 ಲಕ್ಷ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಎನ್ಡಿಆರ್ಎಫ್ ಇನ್ಸ್ಪೆಕ್ಟರ್ ರಾಮ್ ಯಾದವ್ ತಿಳಿಸಿದ್ದಾರೆ.