ಬೆಂಗಳೂರು, ಜು.26 (DaijiworldNews/HR): ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಜುಲೈ 25 ಕ್ಕೆ ಹೈಕಮಾಂಡ್ನಿಂದ ಸಂದೇಶ ಬರುತ್ತದೆ. ಆ ಸಂದೇಶದಂತೆ ನಾನು ನಡೆದುಕೊಳ್ಳುತ್ತೇನೆಂದು ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದು, ಭಾನುವಾರ ಯಾವುದೇ ಸಂದೇಶ ಮುಖ್ಯಮಂತ್ರಿಗಳಿಗೆ ಬಂದಿಲ್ಲ. ಇನ್ನು ಸೋಮವಾರವಾದರೂ ಬರುತ್ತಾ ಎಂಬ ಕುತೂಹಲ ಮೂಡಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗೊಂದಲ ಮುಂದುವರಿದಿದ್ದು, ಜುಲೈ 25 ಕ್ಕೆ ಬಿಜೆಪಿ ಹೈಕಮಾಂಡ್ ಸಂದೇಶ ಬರಲಿದ್ದು ಇಂದು ಮುಖ್ಯಮಂತ್ರಿಗಳು ಸಾಧನಾ ಸಮಾವೇಶದಲ್ಲಿ ಭಾಗಿಯಾಗಿ ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸುತ್ತಾರೆ ಎನ್ನಲಾಗಿತ್ತು. ಆದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಯಡಿಯೂರಪ್ಪ ಅವರು ಆಡಳಿತ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ
ಇನ್ನು ಇಂದು ನಡೆಯಲಿರುವ ಸಾಧನಾ ಸಮಾವೇಶದ ಬಳಿಕ ಏನಾಗಲಿದೆ ಎಂಬುವುದು ಸಾಕಷ್ಟು ಕುತೂಹಲ ಕೆರಳಿಸಿದ್ದು, ಮಾಧ್ಯಾಹ್ಮದ ಬಳಿಕ ಕಾರವಾರಕ್ಕೆ ತೆರಳುವ ಯೋಚನೆಯನ್ನು ಮುಖ್ಯಮಂತ್ರಿಗಳು ಮಾಡಿದ್ದು, ಒಟ್ಟಿನಲ್ಲಿ ಹೈಕಮಾಂಡ್ ಸೂಚನೆಯಂತೆ ಬಿಎಸ್ವೈ ಮುಂದಿನ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.