ನವದೆಹಲಿ, ಜು 26 (DaijiworldNews/PY): ರಾಜ್ಯ ಬಿಜೆಪಿ ಸರ್ಕಾರಕವು ಇಂದು ಎರಡು ವರ್ಷ ಪೂರೈಸಿದೆ. ಈ ನಡುವೆ ಸಿಎಂ ಬದಲಾವಣೆ ವಿಚಾರ ಕೇಳಿಬರುತ್ತಿದೆ. ಸಿಎಂ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, "ಸಿಎಂ ಬದಲಾವಣೆ ಬಗ್ಗೆ ದಿನಕ್ಕೊಂದು ಸುದ್ದಿ ಬರುತ್ತದೆ. ಎಲ್ಲದಕ್ಕೂ ಉತ್ತರ ನೀಡಲು ಸಾಧ್ಯವೇ?. ಎಲ್ಲವನ್ನೂ ಕಾಲವೇ ನಿರ್ಣಯಿಸುತ್ತದೆ" ಎಂದಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, "ಸಿಎಂ ಬದಲಾವಣೆ ವಿಚಾರವಾಗಿ ದಿನಕ್ಕೊಂದು ಸುದ್ದಿ ಬರುತ್ತದೆ. ಹಾಗೆಂದ ಮಾತ್ರಕ್ಕೆ ಎಲ್ಲದಕ್ಕೂ ಉತ್ತರ ನೀಡಲು ಆಗುತ್ತಾ?. ಎಲ್ಲವನ್ನೂ ಕಾಲವೇ ನಿರ್ಣಯಿಸುತ್ತದೆ. ರಾಜ್ಯ ಬಿಜೆಪಿಯಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ" ಎಂದು ತಿಳಿಸಿದ್ದಾರೆ.
"ಎರಡು ವರ್ಷ ಯಡಿಯೂರಪ್ಪ ಅವರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಈ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ಸ್ಪಷ್ಟಪಡಿಸಿದ್ದಾರೆ. ನಾನೂ ಕೂಡಾ ಬಿಎಸ್ವೈ ಸಂಪುಟದಲ್ಲಿ ಸಚಿವನಾಗಿದ್ದವನು. ನಾವೆಲ್ಲರೂ ಪಕ್ಷ ನೀಡಿದ ಜವಾಬ್ದಾರಿಯನ್ನು ನಿರ್ವಹಿಸುತ್ತೇವೆ" ಎಂದಿದ್ದಾರೆ.