ಬೆಂಗಳೂರು, ಜು.26 (DaijiworldNews/HR): ಯಡಿಯೂರಪ್ಪ ಅವರು ಇಂದು ತಮ್ಮ ಮುಖ್ಯಮಮ್ತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಘೋಷಿಸಿದ್ದು, ವಿಧಾನ ಸೌಧದ ಹೊರಗೆ ನಿಂತಿದ್ದ ಕಾರು ಚಾಲಕನ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.
ಯಡಿಯೂಪ್ಪ ಅವರು ಜನಸೇಹಿ ಆಡಳಿತ ಕಾರ್ಯಕ್ರಮದಲ್ಲಿ ಭಾವುಕರಾಗಿ ತಮ್ಮ ನಿರ್ಧಾರ ತಿಳಿಸಿದ್ದು, ಈ ವಿಚಾರ ತಿಳಿಯುತ್ತಿದ್ದಂತೆ ವಿಧಾನ ಸೌಧದ ಹೊರಗೆ ನಿಂತಿದ್ದ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಕಾರು ಚಾಲಕನ ಕಣ್ಣೀರು ಹಾಕಿದ್ದಾರೆ.
ಇನ್ನು ಯಡಿಯೂರಪ್ಪ ಅವರ ನಿರ್ಧಾರ ನೆನೆದು ಕಾರು ಚಾಲಕ ರವಿ ಅತ್ತಿದ್ದು, ಯಡಿಯೂರಪ್ಪ ಅವರೊಂದಿಗೆ ಉತ್ತಮ ಓಡನಾಟ ಹೊಂದಿದ್ದರು ಎನ್ನಲಾಗಿದೆ.