ನವದೆಹಲಿ, ಜು 26 (DaijiworldNews/PY): "ರಾಜ್ಯದ ಮುಂದಿನ ಸಿಎಂ ಬಗ್ಗೆ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ತೀರ್ಮಾನವಾಗಲಿದೆ" ಎಂದು ಪಕ್ಷದ ರಾಜ್ಯ ಉಸ್ತುವಾರಿ ಸಚಿವ ಅರುಣ್ ಸಿಂಗ್ ತಿಳಿಸಿದ್ದಾರೆ.
ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದ ಮುಂದಿನ ಸಿಎಂ ವಿಚಾರವಾಗಿ ವರಿಷ್ಠರು ಸಭೆಯ ಬಳಿಕ ತೀರ್ಮಾನ ಕೈಗೊಳ್ಳಲಿದ್ದಾರೆ" ಎಂದು ಹೇಳಿದ್ದಾರೆ.
"ಪಕ್ಷದ ವೀಕ್ಷಕರು ಸಂಸದೀಯ ಮಂಡಳಿಯ ಸಭೆಯ ನಂತರ ಬೆಂಗಳೂರಿಗೆ ತೆರಳಲಿದ್ದಾರೆ. ಶಾಸಕರು ಹಾಗೂ ಮುಖಂಡರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಕೇಂದ್ರಕ್ಕೆ ವರದಿ ಸಲ್ಲಿಸಲಿದ್ದಾರೆ. ವೀಕ್ಷಕರ ಜೊತೆ ನಾನೂ ಕೂಡಾ ತೆರಳುವೆ" ಎಂದಿದ್ದಾರೆ.
ಮುಂದಿನ ಸಿಎಂ ಯಾರಾಗಲಿದ್ದಾರೆ ಎನ್ನುವುದು ತೀರ್ಮಾನ ಆಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.