ನವದೆಹಲಿ, ಜು.27 (DaijiworldNews/HR): ರಾಷ್ಟ್ರೀಯ ಶಿಕ್ಷಣ ನೀತಿ 2020ರ ಕುರಿತು ಜುಲೈ 29ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂಬ ತಿಳಿದು ಬಂದಿದೆ.
ಈ ಕುರಿತು ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, "ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿಯಲ್ಲಿ ಬದಲಾವಣೆಗಳು ಆರಂಭವಾಗಿ ಒಂದು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದು, ಎನ್ಇಪಿ ಶಿಕ್ಷಣವನ್ನು ಸಮಗ್ರವಾಗಿಸಲು ಮತ್ತು ಆತ್ಮ ನಿರ್ಭಾರ ಭಾರತಕ್ಕೆ ಬಲವಾದ ಅಡಿಪಾಯಗಳನ್ನು ನಿರ್ಮಿಸಲು ಮಾರ್ಗದರ್ಶಕವಾಗಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ 21ನೇ ಶತಮಾನದ ಭಾರತಕ್ಕೆ ಹೊಸ ಆಯಾಮ ನೀಡಲಾಗುವುದು" ಎಂದರು.
ಇನ್ನು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಕಳೆದ ವರ್ಷ ಒಪ್ಪಿಗೆ ಕೊಟ್ಟಿದ್ದ ಕೇಂದ್ರ ಸರ್ಕಾರ 2022ರಲ್ಲಿ ಸ್ವಾತಂತ್ರ್ಯದ 75 ವರ್ಷಗಳು ಪೂರ್ಣಗೊಂಡಾಗ, ಭಾರತದ ಪ್ರತಿಯೊಬ್ಬ ವಿದ್ಯಾರ್ಥಿಯೂ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಓದಬೇಕು ಎಂಬ ಗುರಿಯನ್ನು ಹೊಂದಿತ್ತು ಎನ್ನಲಾಗಿದೆ.