ಗುವಾಹಟಿ, ಜು.27 (DaijiworldNews/HR): ರಾಜ್ಯದ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಅಸ್ಸಾಂ ಮತ್ತು ಮಿಜೋರಾಂ ಗಡಿಯಲ್ಲಿ ಹಿಂಸಾಚಾರ ನಡೆದಿದ್ದು, ಹಿಂಸಾಚಾರದಲ್ಲಿ ಐವರು ಪೊಲೀಸರು ಹಾಗೂ ಓರ್ವ ನಾಗರೀಕ ಮೃತಪಟ್ಟಿದ್ದು, ಅಸ್ಸಾಂ ಸರ್ಕಾರವು ರಾಜ್ಯದಾದ್ಯಂತ 3 ದಿನಗಳ ಶೋಕಾಚರಣೆ ಘೋಷಣೆ ಮಾಡಿದೆ.
ಶೋಕಾಚರಣೆ ಅವಧಿಯಲ್ಲಿ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯಮಿತವಾಗಿ ಹಾರಿಸಲಾಗುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.
ಇನ್ನು ಅಸ್ಸಾಂ ಮತ್ತು ಮಿಜೋರಾಂ ನಡುವೆ ನಡೆದ ಗಡಿ ಸಂಘರ್ಷದಲ್ಲಿ ಅಸ್ಸಾಂನ ಆರು ಮಂದಿ ಪೊಲೀಸರು ಮೃತಪಟ್ಟಿದ್ದು, 60ಕ್ಕಿಂತಲೂ ಅಧಿಕ ಜನರು ಗಾಯಗೊಂಡಿದ್ದಾರೆ.
ಈ ಘಟನೆ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ಉಭಯ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದು, ಶಾಂತಿ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.