ಬೆಂಗಳೂರು, ಜು. 27 (DaijiworldNews/SM): ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದ್ದು, ಬೊಮ್ಮಾಯಿಯವರು ಸಮರ್ಥ ಹಾಗೂ ಯಶಸ್ವಿಯಾಗಿ ಕಾರ್ಯ ನಿರ್ವಹಿಸಲಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾರೈಸಿದ್ದಾರೆ.
ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಬಿಎಸ್ ವೈ, ಬೊಮ್ಮಾಯಿಯವರಿಗೆ, ಹೃತ್ಪೂರ್ವಕ ಅಭಿನಂದನೆಗಳು. ಪಕ್ಷದ ಎಲ್ಲ ನಾಯಕರ ಬೆಂಬಲದೊಂದಿಗೆ, ಲಕ್ಷಾಂತರ ಕಾರ್ಯಕರ್ತರ ಆಶೀರ್ವಾದದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯಲಿರುವ ಬೊಮ್ಮಾಯಿ ಅವರ ಸಮರ್ಥ, ಯಶಸ್ವಿ ಕಾರ್ಯನಿರ್ವಹಣೆ ಮಾಡಲಿ.
ರಾಜ್ಯವನ್ನು ಅಭಿವೃದ್ಧಿಯ ಪಥದತ್ತಕೊಂಡೊಯ್ಯುವಲ್ಲಿ ಬೊಮ್ಮಾಯಿ ಯಶಸ್ವಿಯಾಗಲಿದ್ದಾರೆ ಎಂದು ಬಿಎಸ್ ಯಡಿಯೂರಪ್ಪ ಆಶಿಸಿದ್ದಾರೆ.