ಬೆಂಗಳೂರು, ಜು. 27 (DaijiworldNews/SM):ಹಲವು ಬೆಳವಣಿಗೆಗಳ ಬಳಿಕ ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿಯವರನ್ನು ಆಯ್ಕೆ ಮಾಡಲಾಗಿದೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಹಿಂದೆ ಸಿಎಂ ಆಗಿದ್ದ ಬಿಎಸ್ ಯಡಿಯೂರಪ್ಪನವರು ಸರಕಾರ ಹಾಗೂ ಪಕ್ಷಕ್ಕೆ ಮಾರ್ಗದರ್ಶಕರಾಗಿರಲಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಒಮ್ಮತದಿಂದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ. ಬೊಮ್ಮಾಯಿಯವರ ನಾಯಕತ್ವದಲ್ಲಿ ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಲಿವೆ ಎಂದಿದ್ದಾರೆ.