ಲಕ್ನೋ, ಜು 28 (DaijiworldNews/MS): ಜಿಲ್ಲೆಯ ರಾಮ್ಸ್ನೇಹಿಘಾಟ್ ಪೊಲೀಸ್ ಠಾಣೆ ಬಳಿ ಲಖನೌ-ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಟ್ರಕ್ಗೆ ಡಬಲ್ ಡೆಕ್ಕರ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಉತ್ತರ ಪ್ರದೇಶದ ಬರಾಬಂಕಿಯಲ್ಲಿ ಸಂಭವಿಸಿದ ದೊಡ್ಡ ರಸ್ತೆ ಇದಾಗಿದ್ದು ಘಟನೆಯಲ್ಲಿ ಇತರ 19 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಲಕ್ನೋ ಟ್ರಾಮಾ ಸೆಂಟರ್ ಗೆ ದಾಖಲಿಸಲಾಗಿದೆ.
ಮಂಗಳವಾರ ಮತ್ತು ಬುಧವಾರದ ನಡುವಿನ ಮಧ್ಯರಾತ್ರಿ 1:30 ರ ಸುಮಾರಿಗೆ ಈ ಘಟನೆ ನಡೆದಿದೆ. ಅಯೋಧ್ಯೆ ಗಡಿಯ ಕಲ್ಯಾಣಿ ನದಿ ಸೇತುವೆಯಲ್ಲಿ 1 ಗಂಟೆಯ ವೇಳೆಗೆ ಬಸ್ಸಿನ ಆ್ಯಕ್ಸಿಲ್ ತುಂಡಾಗಿ ಬಸ್ಸು ಕೆಟ್ಟು ನಿಂತಿತ್ತು. ಚಾಲಕ ಹಾಗೂ ಆಪರೇಟರ್, ಬಸ್ಸನ್ನು ಬದಿಯಲ್ಲಿ ನಿಲ್ಲಿಸಿ ದುರಸ್ತಿ ಮಾಡುತ್ತಿದ್ದರು. ಏತನ್ಮಧ್ಯೆ ಲಕ್ನೋ ಕಡೆಯಿಂದ ವೇಗವಾಗಿ ಬಂದ ಟ್ರಕ್ಕೊಂದು ಬಸ್ಸಿಗೆ ಢಿಕ್ಕಿ ಹೊಡೆದಿದೆ. ಬಸ್ಸು ದುರಸ್ತಿ ಮಾಡುವ ವೇಳೆ ರಸ್ತೆ ಬದಿಯಲ್ಲಿ ನಿದ್ರಿಸುತ್ತಿದ್ದ 18 ಮಂದಿ ಕೂಲಿಕಾರ್ಮಿಕರು ಮೃತಪಟ್ಟಿದ್ದು, ಇತರ 19 ಮಂದಿ ಗಾಯಗೊಂಡಿದ್ದಾರೆ.
ಘಟನೆಯಲ್ಲಿ 18 ಮಂದಿ ಜೀವ ಕಳೆದುಕೊಂಡಿದ್ದು, ಇತರ 19 ಮಂದಿ ಗಾಯಗೊಂಡಿದ್ದಾರೆ. ಪರಿಹಾರ ಕಾರ್ಯಾಚರಣೆ ಮುಂದುವರಿದಿದ್ದು, ಬಸ್ಸಿನಡಿ ಸಿಕ್ಕಿಹಾಕಿಕೊಂಡ ದೇಹಗಳನ್ನು ಹೊರಗೆಳೆಯುವ ಪ್ರಯತ್ನ ನಡೆದಿದೆ.ಹೆಚ್ಚಿನ ಪ್ರಯಾಣಿಕರು ಸೀತಾಮರ್ಹಿ ಮತ್ತು ಸಹರ್ಸಾ ಸೇರಿದಂತೆ ಬಿಹಾರದ ವಿವಿಧ ಜಿಲ್ಲೆಗಳಿಂದ ಬಂದವರು ಎಂದು ಲಕ್ನೋ ವಲಯ ಎಡಿಜಿಪಿ ನಾರಾಯಣ ಸಬತ್ ಹೇಳಿದ್ದಾರೆ.