ಬೆಂಗಳೂರು, ಜು 28 (DaijiworldNews/PY): ಕರ್ನಾಟಕದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದು, ನಂತರ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪ್ರಮಾಣ ವಚನ ಸಮಾರಂಭದ ನಂತರ ಸಚಿವ ಸಂಪುಟ ಸಭೆ ನಡೆಸಲಿದ್ದೇನೆ. ನಂತರ ರಾಜ್ಯದ ಪ್ರವಾಹ ಹಾಗೂ ಕೊರೊನಾ ಪರಿಸ್ಥಿತಿ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದೇನೆ" ಎಂದು ತಿಳಿಸಿದ್ದಾರೆ.
ಮಂಗಳವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸಮಾರಂಭ ನಡೆಯಲಿದ್ದು, ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.