ನವದೆಹಲಿ, ಜು 28 (DaijiworldNews/PY): "ಮೋದಿ ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ" ಎಂದು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ತಿಳಿಸಿದ್ದಾರೆ.
ಮೋದಿ ಸರ್ಕಾರದ ಸಚಿವೆಯರಿಗೆ ಅಭಿನಂದನೆ ಸಲ್ಲಿಸಲು ಬಿಜೆಪಿ ಮಹಿಳಾ ಮೋರ್ಚಾ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಮಹಿಳೆಯರಿಗೆ ಕೆಲಸ ಮಾಡಲು ಹಾಗೂ ಬೆಳವಣಿಗೆ ಹೊಂದಲು ಬಿಜೆಪಿಯಷ್ಟು ಬೇರೆ ಯಾವುದೇ ಪಕ್ಷ ಕೂಡಾ ಅವಕಾಶ ನೀಡಿಲ್ಲ. ಆದರೆ, ಮೋದಿ ಸರ್ಕಾರ ಮಹಿಳೆಯ ಸಬಲೀಕರಣಕ್ಕಾಗಿ ಸಾಕಷ್ಡು ಕ್ರಮ ಕೈಗೊಂಡಿದೆ" ಎಂದು ಹೇಳಿದ್ದಾರೆ.
"ಬಿಜೆಪಿ ಪಕ್ಷವು ತನ್ನ ನೀತಿ, ಕಾರ್ಯಕ್ರಮ ಆಡಳಿತದಲ್ಲಿ ಉಳಿದೆಲ್ಲಾ ಪಕ್ಷಗಳಿಗಿಂತ ಹೆಚ್ಚಿನ ಅವಕಾಶವನ್ನು ಮಹಿಳೆಯರಿಗೆ ನೀಡಿದೆ" ಎಂದು ತಿಳಿಸಿದ್ದಾರೆ.
"ಮಹಿಳೆಯರಿಗೆ ಭಾರತದ ಸಂಸ್ಕೃತಿ ಮೊದಲ ಆದ್ಯತೆ ನೀಡಿದೆ" ಎಂದಿದ್ದಾರೆ.
ಇತ್ತೀಚೆಗೆ ನಡೆದ ಕೇಂದ್ರ ಸಂಪುಟ ಪುನರ್ರಚನೆಯ ಸಂದರ್ಭ ಏಳು ಮಹಿಳೆಯರಿಗೆ ಸ್ಥಾನ ನೀಡಲಾಗಿತ್ತು, ಈ ಮೂಲಕ ಕೇಂದ್ರ ಸಂಪುಟದಲ್ಲಿ ಮಹಿಳೆಯರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.