ಮೈಸೂರು, ಜು. 28 (DaijiworldNews/SM): ರಾಜ್ಯದಲ್ಲಿ "ಬಿ.ಎಸ್. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಇಳಿಸಿ ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಮಾಡಲಾಗಿದೆ. ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಸಿಎಂ ಆಗಿದ್ದಾರೆ ಎಂದ ಮಾತ್ರಕ್ಕೆ ಬಿಜೆಪಿಯ ಅಜೆಂಡಾ ಬದಲಾಗುತ್ತಾ'' ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, "ಮುಖ್ಯಮಂತ್ರಿ ಬದಲಾದರೆ ಎಲ್ಲವೂ ಬದಲಾಗುತ್ತಾ? ಕೋಮುವಾದ ಹೊರಟು ಹೋಗುತ್ತಾ? ಹಿಂದುತ್ವದ ಅವರ ಅಜೆಂಡಾ ಬದಲಾಗುತ್ತಾ? ಎಂದು ಪ್ರಶ್ನಿಸಿದ ಅವರು, ಬಿಜೆಪಿಯವರು ಯಾವತ್ತಿಗೂ ಅಲ್ಪಸಂಖ್ಯಾತರು, ದಲಿತರು, ಬಡವರ ವಿರೋಧಿಗಳು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.