ಹುಬ್ಬಳ್ಳಿ, ಜು 29 (DaijiworldNews/PY): ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಜೆಡಿಎಸ್ ಪಕ್ಷವನ್ನು ತೊರೆದಿದ್ದು, ಕಾಂಗ್ರೆಸ್ಗೆ ಸೇರ್ಪಡೆಗೊಳ್ಳುವುದು ಫಿಕ್ಸ್ ಆಗಿತ್ತು. ಆದರೆ, ಮಧು ಬಂಗಾರಪ್ಪ ಅವರು ಯಾವಾಗ ಕಾಂಗ್ರೆಸ್ಗೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ ಎನ್ನುವುದು ನಿಗದಿಯಾಗಿರಲಿಲ್ಲ. ಇದೀಗ ಜುಲೈ 30ರಂದು ಮಧು ಬಂಗಾರಪ್ಪ ಅವರು ಕಾಂಗ್ರೆಸ್ಗೆ ಸೇರ್ಪಡೆಗೊಳ್ಳುವುದು ನಿಗದಿಯಾಗಿದೆ.
ಈ ಬಗ್ಗೆ ಕಾಂಗ್ರೆಸ್ನಿಂದ ಅಧಿಕೃತ ಮಾಹಿತಿಹ ಹೊರಬಿದ್ದಿದ್ದು, ಗೋಕುಲ ಗಾರ್ಡನ್ನಲ್ಲಿ ಜುಲೈ 30ರಂದು ಬೆಳಗ್ಗೆ 9 ಗಂಟೆಗೆ ನಡೆಯುವ ಸರಳ ಸಮಾರಂಭದಲ್ಲಿ ಮಧು ಬಂಗಾರಪ್ಪ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ.
ಕೇವಲ ಮಧು ಬಂಗಾರಪ್ಪ ಅವರು ಮಾತ್ರವಲ್ಲದೇ ಅವರ ಬೆಂಬಲಿಗರು ಕೂಡಾ ಜೆಡಿಎಸ್ ಪಕ್ಷ ತೊರೆದು ಅಧಿಕೃತವಾಗಿ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ವಿಪಕ್ಷ ನಾಯ ಸಿದ್ದರಾಮಯ್ಯ ಹಾಗೂ ವಿವಿಧ ಮುಖಂಡರು ಭಾಗವಹಿಸಲಿದ್ದಾರೆ.