ಬೆಂಗಳೂರು, ಜು 29 (DaijiworldNews/PY): ಮಾಜಿ ಸಿಎಂ ಹಾಗೂ ಹಿಂದಿನ ಸರ್ಕಾರದಲ್ಲಿ ಕೈಗಾರಿಕಾ ಸಚಿವರಾಗಿದ್ದ ಜಗದೀಶ್ ಶೆಟ್ಟರ್ ಅವರು ಬಸವರಾಜ ಬೊಮ್ಮಾಯಿ ಅವರ ಸಂಪುಟಕ್ಕೆ ಸೇರದಿರಲು ತೀರ್ಮಾನಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಜಗದೀಶ್ ಶೆಟ್ಟರ್, "ನಾನು ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟಕ್ಕೆ ಸೇರುವುದಿಲ್ಲ. ಈ ಹಿಂದೆ ನಾನು ಸಭಾಧ್ಯಕ್ಷನಾಗಿ, ಸಚಿವನಾಗಿ, ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಈಗ ಕಿರಿಯರಾದ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾರೆ. ಅವರ ಸಂಪುಟದಲ್ಲಿ ಕೆಲಸ ಮಾಡುವ ಆಂಕಾಕ್ಷೆ ನನಗಿಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಪಕ್ಷದ ವರಿಷ್ಠರು ಜವಾಬ್ದಾರಿ ನೀಡಿದರೆ ನಿರ್ವಹಿಸುತ್ತೇನೆ. ಇದು ನನ್ನ ವೈಯುಕ್ತಿಕ ತೀರ್ಮಾನ. ಮಾಜಿ ಸಿಎಂ ಯಡಿಯೂರಪ್ಪ ಅವರಿಗೂ ಈ ಬಗ್ಗೆ ಮಾಹಿತಿ ನೀಡಿದ್ದೇನೆ" ಎಂದಿದ್ದಾರೆ.
ನಳಿನ್ ಕುಮಾರ್ ಕಟೀಲ್ ಆಡಿಯೋ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಇದಕ್ಕೂ ಹಾಗೂ ನಳಿನ್ ಹೇಳಿಕೆಗೂ ಯಾವುದೇ ರೀತಿಯಾದ ಸಂಬಂಧವಿಲ್ಲ. ಇದು ನನ್ನ ವೈಯುಕ್ತಿಕ ತೀರ್ಮಾನ" ಎಂದು ತಿಳಿಸಿದ್ದಾರೆ.