ಬೆಂಗಳೂರು, ಜು 29 (DaijiworldNews/MS):ಮಾಜಿ ಮುಖ್ಯಮಂತ್ರಿ ದಿ. ಎಸ್.ಆರ್.ಬೊಮ್ಮಾಯಿ ಅವರ ಗುಣ ಅವರ ಮಗನಾದ ಬಸವರಾಜ ಬೊಮ್ಮಾಯಿಗೆ ಬರುತ್ತೆ ಎಂದು ಹೇಳಲು ಸಾಧ್ಯವಿಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಬಿಜೆಪಿ ಖಾರವಾಗಿ ತೀರ ವೈಯಕ್ತಿಕ ಮಟ್ಟದ ಪ್ರತಿಕ್ರಿಯೆ ನೀಡಿದೆ.
" ಎಸ್.ಆರ್.ಬೊಮ್ಮಾಯಿ ಗುಣ ಮಗನಿಗೆ ಬರುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಮಹಾತ್ಮಾ ಗಾಂಧಿ ಮಗ ಕುಡುಕನಾದ. ಮಹಾತ್ಮಾ ಗಾಂಧಿಯ ಮಗ ಮಹಾತ್ಮಾ ಗಾಂಧಿಯಾಗಲಿಲ್ಲ. ಅದೇ ರೀತಿ ಬೊಮ್ಮಯಿ ಮಗ ತಂದೆಯಂತೆ ಆಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ತಂದೆಯ ಗುಣ ಕೆಲವು ಮಕ್ಕಳಿಗೆ ಬರುವುದಿಲ್ಲ ಎಂದು ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆಯೊಂದನ್ನು ನೀಡಿದ್ದರು.
ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ಟ್ವೀಟ್ ಮಾಡಿ "ನಿಮ್ಮ ಹಿರಿಯ ಪುತ್ರ ರಾಕೇಶ್ ವಿಪರೀತ ಕುಡಿಯುವ ಅಭ್ಯಾಸ ಹೊಂದಿದ್ದರೆಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಕುಡಿದ ಮತ್ತಿನಲ್ಲಿ ಹಿರಿಯರ ಮೇಲೂ ದೌರ್ಜನ್ಯ ಎಸಗಿದ ಬಗ್ಗೆ ಸುದ್ದಿಯಾಗಿತ್ತು. ಇದೆಲ್ಲ ಅಪ್ಪನ ಗುಣ ಎಂದು ಸಾಮಾನ್ಯೀಕರಿಸಲು ಸಾಧ್ಯವೇ ಎಂದು ಪ್ರಶ್ನಿಸಿದೆ
ಮುಂದುವರಿಸಿ ಮತ್ತೊಂದು ಟ್ವೀಟ್ ಮಾಡಿದ ಬಿಜೆಪಿ: ಸಿದ್ದರಾಮಯ್ಯ ಅವರೇ ನೀವು ಯಾವ ಗಾಂಧಿಯ ಬಗ್ಗೆ ಹೇಳಿದ್ದು?ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿಯ ಪುತ್ರನ ಬಗ್ಗೆಯೋ! ಸಿದ್ದರಾಮಯ್ಯನವರೇ, ನಿಮ್ಮ ಹಿರಿಯ ಪುತ್ರ ರಾಕೇಶ್ ವಿಪರೀತ ಕುಡಿಯುವ ಅಭ್ಯಾಸ ಹೊಂದಿದ್ದರೆಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಕುಡಿದ ಮತ್ತಿನಲ್ಲಿ ಹಿರಿಯರ ಮೇಲೂ ದೌರ್ಜನ್ಯ ಎಸಗಿದ ಬಗ್ಗೆ ಸುದ್ದಿಯಾಗಿತ್ತು. ಇದೆಲ್ಲ ಅಪ್ಪನ ಗುಣ ಎಂದು ಸಾಮಾನ್ಯೀಕರಿಸಲು ಸಾಧ್ಯವೇ ? ಎಂದು ಪ್ರಶ್ನಿಸಿದೆ
ಪ್ರಾಮಾಣಿಕವಾಗಿ ಹೇಳಿ ಸಿದ್ದರಾಮಯ್ಯನವರೇ, ನಿಮ್ಮ ಪುತ್ರ, ಡಾ. ಯತೀಂದ್ರ ಅವರಿಗೆ ನಿಮ್ಮ ಗುಣ ಎಷ್ಟು ಬಂದಿದೆ? ಸಾಮಾನ್ಯವಾಗಿ ತಂದೆಯಿಂದ ಮಗನಿಗೆ ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ. ಸಂಸ್ಕಾರ, ಗುಣ, ಸಾಮರ್ಥ್ಯ ಅವರವರ ಗಳಿಕೆ ಎಂಬುದನ್ನು ಅರ್ಥೈಸಿಕೊಳ್ಳಿ ಎಂದು ಕುಟುಕಿರುವ ಬಿಜೆಪಿ ಮಜವಾದಿಸಿದ್ದರಾಮಯ್ಯ ಎಂದು ಕರೆದಿದೆ