ಹುಬ್ಬಳ್ಳಿ, ಜು 29 (DaijiworldNews/PY): ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಸಿಎಂ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ವಾಹನಕ್ಕೆ ಗುದ್ದಿರುವ ಘಟನೆ ಗುರುವಾರ ಬೆಳಗ್ಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಮುಂಭಾಗ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಮಳೆ ಬಾಧಿತ ಪ್ರದೇಶದ ಸಮೀಕ್ಷೆಗೆಂದು ತೆರಳುವ ಹಿನ್ನೆಲೆ ಬೆಂಗಳೂರಿನಿಂದ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಸಿಎಂ ಬಂದಿಳಿದಿದ್ದರು. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಅವರು ಹೊರಹೋಗುತ್ತಿದ್ದ ಸಂದರ್ಭ ಸಿಎಂ ಅವರ ಕಾರನ್ನು ಹಿಂಬಾಲಿಸುವ ಭರದಲ್ಲಿ ಶಿವರಾಮ್ ಹೆಬ್ಬಾರ್ ಅವರ ಕಾರು ಸಿಎಂ ಅವರ ಬೆಂಗಾವಲು ವಾಹನಕ್ಕೆ ಗುದ್ದಿದೆ.
ಕಾರಿನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯ ಸಂಭವಿಸಿಲ್ಲ.