ನವದೆಹಲಿ,ಜು 29 (DaijiworldNews/MS): ಭೂಗತ ಪಾತಕಿ ಛೋಟಾ ರಾಜನ್ ಅನಾರೋಗ್ಯದ ಹಿನ್ನಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜು.27ರಂದು ಏಮ್ಸ್ ಗೆ ಕರೆತಂದು ಪ್ರಸ್ತುತ ಅಲ್ಲಿ ಚಿಕಿತ್ಸೆಯಲ್ಲಿದ್ದಾರೆ ಎಂದು ತಿಹಾರ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಛೋಟಾ ರಾಜನ್ ಸಾಮಾನ್ಯ ಕ್ರಿಮಿನಲ್ ಅಲ್ಲ. ದೇಶದ ಕಾನೂನುಗಳನ್ನು ಗೌರವಿಸದ ಆತನ ಪ್ರಕರಣವನ್ನು ಉಳಿದವರ ಕೇಸ್ಗಳಂತೆ ಪರಿಗಣಿಸಬಾರದು ಆತನಿಗೆ ಯಾವುದೇ ಕಾರಣಕ್ಕೂ ಜಾಮೀನು ಕೇಂದ್ರ ತನಿಖಾ ದಳ ಬುಧವಾರ ಬಾಂಬೆ ಹೈಕೋರ್ಟ್ಗೆ ಮನವಿ ಮಾಡಿದ ಒಂದು ದಿನದ ನಂತರ ಡಾನ್ ರಾಜನ್ ಅನಾರೋಗ್ಯದ ಸುದ್ದಿ ಬಂದಿದೆ.
61ವರ್ಷದ ಅವರಿಗೆ ಸದ್ಯ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಏಮ್ಸ್ಗೆ ದಾಖಲಿಸಲಾಗಿದೆ. ಈ ಮೊದಲು ಕೊವಿಡ್ 19 ಪಾಸಿಟಿವ್ ಆಗಿ ಅಡ್ಮಿಟ್ ಆಗಿದ್ದರು. ಭೂಗತ ಪಾತಕಿ ಛೋಟಾ ರಾಜನ್ ಇಂಡೋನೇಷಿಯಾದ ಬಾಲಿಯಲ್ಲಿ 2015ರಲ್ಲಿ ಬಂಧಿಸಲಾಗಿತ್ತು. ಅದಾದ ಬಳಿಕ ಭಾರತಕ್ಕೆ ವಾಪಸ್ ಕರೆತಂದು ತಿಹಾರ್ ಜೈಲಿನಲ್ಲಿ ಇಡಲಾಗಿತ್ತು. 2011ರಲ್ಲಿ ನಡೆದಿದ್ದ ಪತ್ರಕರ್ತ ಜೆ.ಡೇ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2018ರಲ್ಲಿ ಛೋಟಾ ರಾಜನ್ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಛೋಟಾ ರಾಜನ್ ವಿರುದ್ಧ ವಿಚಾರಣೆ ಮಾಡಬೇಕಾದ ಹಲವು ಪ್ರಕರಣಗಳು ಬಾಕಿ ಇವೆ. ಅವನು ರಾಷ್ಟ್ರದ ಪಾಲಿಗೆ ಝಡ್ ಪ್ಲಸ್ ಸೆಕ್ಯೂರಿಟಿ ಬೆದರಿಕೆ ಎಂದು ವಿಶೇಷ ಸಾರ್ವಜನಿಕ ಪ್ರಾಸಿಕ್ಯೂಟರ್ ಪರ್ದೀಪ್ ಘಾರಟ್, ಬಾಂಬೆ ಹೈಕೋರ್ಟ್ನ ಅನುಜಾ ಪ್ರಭುದೇಸಾಯ್ ನೇತೃತ್ವದ ಪೀಠಕ್ಕೆ ತಿಳಿಸಿದ್ದಾರೆ. ಒಟ್ಟು ಮೂರು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಜಾಮೀನು ನೀಡುವಂತೆ ಛೋಟಾ ರಾಜನ್ ಬಾಂಬೆ ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.
"ನಾನು (ರಾಜನ್) ಪಿತೂರಿ ಆರೋಪದ ಮೇಲೆ ಮಾತ್ರ ಶಿಕ್ಷೆಗೊಳಗಾಗಿದ್ದೇನೆ. ಈ ಪ್ರಕರಣದಲ್ಲಿ ಇತರ ಎಲ್ಲ ಆರೋಪಿಗಳು, ನಿಜವಾದ ಹಲ್ಲೆಕೋರರು ಸೇರಿದಂತೆ ಜಾಮೀನಿನ ಮೇಲೆ ಹೊರಬಂದಿದ್ದಾರೆ, ಆದ್ದರಿಂದ ನಾನು ಸಮಾನತೆಗೆ ಅರ್ಹನಾಗಿದ್ದೇನೆ" ಎಂದು ರಾಜನ್ ಅವರ ವಕೀಲ, ಹಿರಿಯ ವಕೀಲ ಸುದೀಪ್ ಪಾಸ್ಬೋಲಾ , ನಿನ್ನೆ ನ್ಯಾಯಾಲಯದಲ್ಲಿ ವಾದಿಸಿದರು,