ನವದೆಹಲಿ, ಜು 30 (DaijiworldNews/MS): ರಾಜ್ಯ ಸರ್ಕಾರದ ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿದ ಬಳಿಕ ಬಸವರಾಜ ಬೊಮ್ಮಾಯಿಯವರು ಮೊದಲ ಬಾರಿ ದೆಹಲಿ ವಿಮಾನ ಏರಿ ರಾಜ್ಯ ರಾಜಧಾನಿ ತಲುಪಿದ್ದುಇಂದಿರಾ ಗಾಂಧಿ ವಿಮಾನ ನಿಲ್ದಾಣದ ಬಳಿ ಹಲವರು ಬರಮಾಡಿಕೊಂಡಿದ್ದಾರೆ.
ಸಿಎಂ ದೆಹಲಿ ಭೇಟಿ ರಾಜ್ಯದ ಸಚಿವ ಸ್ಥಾನಾಕಾಂಕ್ಷಿಗಳ ನಿರೀಕ್ಷೆ ಹೆಚ್ಚಿಸುವಂತೆ ಮಾಡಿದೆ. ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲಿರುವ ಸಿಎಂ ಬಸವರಾಜ ಬೊಮ್ಮಾಯಿ ನಂತರ ಅಮಿತ್ ಶಾ, ಅಧ್ಯಕ್ಷ ಜೆ ಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರನ್ನು ಸಹ ಭೇಟಿ ಮಾಡಲಿದ್ದಾರೆ.
ಇಂದು ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಸಚಿವ ಸಂಪುಟ ರಚನೆ ಬಗ್ಗೆ ಚರ್ಚಿಸಲಿದ್ದಾರೆಯೇ, ನೂತನ ಸಚಿವರ ಪಟ್ಟಿ ಸಿದ್ದ ಮಾಡಿಕೊಂಡೇ ಇಂದು ಹೋಗಿದ್ದಾರೆಯೇ ಎಂಬ ಕುತೂಹಲ ಮನೆಮಾಡಿದೆ.
ಇಂದಿನ ದೆಹಲಿ ಭೇಟಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಕೇವಲ ಧನ್ಯವಾದ ಹೇಳಲು ಬಂದಿರುವ ಭೇಟಿ, ಸಂಪುಟ ರಚನೆ ಬಗ್ಗೆ ಚರ್ಚಿಸುವುದಿಲ್ಲ ಎಂದು ಸಿಎಂ ಬೊಮ್ಮಾಯಿಯವರು ಹೇಳಿದರೂ ಕೂಡ ಹಲವು ಸಚಿವಾಕಾಂಕ್ಷಿ ಶಾಸಕರು ಈಗ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.