ನವದೆಹಲಿ,ಜು.30 (DaijiworldNews/HR): ಕರ್ನಾಟಕದ ಸಚಿವ ಸಂಪುಟ ರಚನೆ ಯಾವುದೇ ಅಡ್ಡಿ-ಆತಂಕಗಳು ಬರದೆ ಸುಗಮವಾಗಿ ನಡೆಯುತ್ತದೆ, ನಮ್ಮದು ರಾಷ್ಟ್ರೀಯ ಪಕ್ಷ, ಇಲ್ಲಿ ಹಲವು ಆಕಾಂಕ್ಷಿಗಳು ಇರುತ್ತಾರೆ, ಪ್ರಾದೇಶಿಕ, ಸಮುದಾಯ ಪ್ರಾತಿನಿಧ್ಯ ನೋಡಿಕೊಂಡು ಸಚಿವ ಸಂಪುಟ ರಚನೆ ಮಾಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾದಿದ ಅವರು, ಇಂದು ಸಂಜೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಬಳಿಕ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡುತ್ತೇನೆ. ಅದಕ್ಕೆ ಮುನ್ನ ಇಂದು ಬೆಳಗ್ಗೆ ರಾಜನಾಥ್ ಸಿಂಗ್ ಹಾಗೂ ನಂತರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದು, ಭೇಟಿಯಾದಾಗ ಅವರು ನೀಡುವ ಸಲಹೆ, ಸೂಚನೆ ಪ್ರಕಾರ ಮುಂದಿನ ನಿರ್ಣಯ ಕೈಗೊಳ್ಳುತ್ತೇನೆ" ಎಂದರು.
ಇನ್ನು ಕರ್ನಾಟಕದಲ್ಲಿ ಸಚಿವ ಸಂಪುಟ ರಚನೆ ಸುಗಮವಾಗಿ ನಡೆಯುತ್ತದೆ, ಅದಕ್ಕೆ ಯಾವುದೇ ಅಡ್ಡಿ-ಆತಂಕಗಳು ಬರದೆ ಉತ್ತಮವಾಗಿ ನಡೆಯುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷ, ಇಲ್ಲಿ ಹಲವು ಆಕಾಂಕ್ಷಿಗಳು ಇರುತ್ತಾರೆ, ಪ್ರಾದೇಶಿಕ, ಸಮುದಾಯ ಪ್ರಾತಿನಿಧ್ಯ ನೋಡಿಕೊಂಡು ಸಚಿವ ಸಂಪುಟ ರಚನೆ ಮಾಡಬೇಕಾಗುತ್ತದೆ" ಎಂದು ಹೇಳಿದ್ದಾರೆ.