ಚೆನ್ನೈ, ಜು 30 (DaijiworldNews/PY): ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಮೇಕೆದಾಟು ಬಳಿ ಡ್ಯಾಂ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಆಗಸ್ಟ್ 5ರಂದು ಕರ್ನಾಟಕ ಸರ್ಕಾರದ ವಿರುದ್ದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳಿದ್ದಾರೆ.
"ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮೇಕೆದಾಟು ಡ್ಯಾಂ ನಿರ್ಮಾಣ ಮಾಡುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆ ಆಗಸ್ಟ್ 5ರಂದು ಅಣ್ಣಾಮಲೈ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ" ಎಂದಿದ್ದಾರೆ.
"ಮೇಕೆದಾಟು ವಿಚಾರದ ಬಗ್ಗೆ ನಮ್ಮ ಪಕ್ಷದ ನಿಲು ಸ್ಪಷ್ಟವಾಗಿದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದ್ದರೂ ಕೂಡಾ ತಮಿಳುನಾಡು ಬಿಜೆಪಿ, ಇಲ್ಲಿನ ಜನರ ಹಾಗೂ ರೈತರ ಹಿತಾಸಕ್ತಿಯ ಪರವಾಗಿ ಕೆಲಸ ಮಾಡಲಿದೆ. ತಮಿಳುನಾಡು ರೈತರು ಯಾವುದೇ ರೀತಿಯಾದ ಸಮಸ್ಯೆಗಳನ್ನು ಎದುರಿಸಬಾರದು. ಸುಪ್ರೀಂ ಆದೇಶದ ಪ್ರಕಾರ, ರಾಜ್ಯ ತನ್ನ ಪಾಲಿನ ಕಾವೇರಿ ನೀರನ್ನು ಪಡೆಯಬೇಕು" ಎಂದು ತಿಳಿಸಿದ್ದಾರೆ.