ಹುಬ್ಬಳ್ಳಿ, ಜು.30 (DaijiworldNews/HR): ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ಗೆ ಇಂದು ಸೇರ್ಪಡೆಗೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಸಿದ್ದರಾಮಯ್ಯ, ಇಂದು ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ,ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಧ್ವಜ ನೀಡುವ ಮೂಲಕ ಮಧು ಬಂಗಾರಪ್ಪ ಅವರನ್ನು ಪಕ್ಷಕ್ಕೆ ಸ್ವಾಗತ ಮಾಡಿಕೊಂಡಿದ್ದಾರೆ.
ಇನ್ನು ಈ ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿ ಮಧು ಯಾಕ್ಷಿಗೌಡ, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಹಿರಿಯ ನಾಯಕರಾದ ಕೆ.ಎಚ್. ಮುನಿಯಪ್ಪ, ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ಶಾಸಕ ಪ್ರಸಾದ್ ಅಬ್ಬಯ್ಯ ಹಾಗೂ ಮಧು ಬಂಗಾರಪ್ಪ ಅವರ ಸಾವಿರಾರು ಬೆಂಬಲಿಗರು ಹಾಜರಿದ್ದರು.