ಚಾಮರಾಜನಗರ, ಜು.30 (DaijiworldNews/HR): ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದ್ದಿ ಕೇಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ರವಿ ಮನೆಗೆ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರಕ್ಕೆ ತೆರಳಿದ್ದು, ಆತ್ಮಹತ್ಯೆಗೆ ಶರಣಾದ ಅಭಿಮಾನಿ ಕುಟುಂಬಕ್ಕೆ ಸಾಂತ್ವನ ಹೇಳಿ ಆತ್ಮಹತ್ಯೆ ಮಾಡಿಕೊಂಡ ರವಿ ಕುಟುಂಬಕ್ಕೆ 5 ಲಕ್ಷ ರೂ. ನೀಡಿ. ಇನ್ನೂ 5 ಲಕ್ಷ ರೂ. ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ.
ರವಿ ಕುಟುಂಬವನ್ನು ಭೇಟಿ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, "ಪಕ್ಷವನ್ನು ಬಲಪಡಿಸಲು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದು, ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ" ಎಂದು ಹೇಳಿದ್ದಾರೆ.