ಬೆಂಗಳೂರು, ಜು.30 (DaijiworldNews/HR): ಅರೆಸೇನಾ ಪಡೆಯ ಶಿಬಿರದೊಳಗೆ ವಿಚಾರಣೆ ನಡೆಸುವ ನೆಪದಲ್ಲಿ ಬಾಂಗ್ಲಾದೇಶದ ಮಹಿಳೆಯನ್ನು ಕರೆತಂದು ಅತ್ಯಾಚಾರ ನಡೆಸಿದ ಆರೋಪದ ಮೇಲೆ ಬಿಎಸ್ಎಫ್ ಸಿಬ್ಬಂದಿಯೊಬ್ಬರನ್ನು ಬಂಧಿಸಿದ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ಈ ಕುರಿತು ಮಾಹಿತಿ ನೀಡಿರುವ ಅರೆ ಸೇನಾ ಪಡೆಯ ಹಿರಿಯ ಅಧಿಕಾರಿ, ಜುಲೈ 27 ರ ರಾತ್ರಿ ಈ ಘಟನೆ ನಡೆದಿದ್ದು, ಸಂತ್ರಸ್ಥೆ ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿ ಬಿಎಸ್ಎಫ್ ಸಬ್ ಇನ್ಸ್ಪೆಕ್ಟರ್ನನ್ನು ಬಂಧಿಸಿ ಅಮಾನತುಗೊಳಿಸಿದೆ ಎಂದು ತಿಳಿಸಿದ್ದಾರೆ.
ಇನ್ನು ಸಂತ್ರಸ್ಥೆ ಹಾಗೂ ಇನ್ನೊಬ್ಬ ಮಹಿಳೆ ಬಾಂಗ್ಲಾದೇಶದ ಗೋಪಾಲ್ ಗಂಜ್ ಮೂಲದವರಾಗಿದ್ದು, ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸುವಾಗ ಬಂಧಿಸಲಾಗಿದೆ.
"ಬಿಎಸ್ಎಫ್ ಸಿಬ್ಬಂದಿ ಇಬ್ಬರೂ ಮಹಿಳೆಯರನ್ನು ಅರೆಸೇನಾ ಪಡೆಯ ಖರೆರ್ ಮಠ ಶಿಬಿರಕ್ಕೆ ವಿಚಾರಣೆಗಾಗಿ ಕರೆದೊಯ್ದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.