ನವದೆಹಲಿ, ಜು.30 (DaijiworldNews/HR): ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) 12ನೇ ತರಗತಿಯ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟವಾಗಿದ್ದು, ಈ ವರ್ಷ ಶೇಕಡಾ 99.37 ರಷ್ಟು ವಿದ್ಯಾರ್ಥಿಗಳು ಪಾಸಾಗಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.
ಸಾಂಧರ್ಭಿಕ ಚಿತ್ರ
ಈ ಬಾರಿ 70 ಸಾವಿರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಶೇ. 95ರಷ್ಟು ಅಂಕಗಳಿಸಿರುದ್ದು, ಶೇ. 0.54ರ ಅಂತರದಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಇನ್ನು 65,000ಕ್ಕೂ ಅಧಿಕ ಅಭ್ಯರ್ಥಿಗಳ ಫಲಿತಾಂಶವನ್ನು ಇನ್ನೂ ಸಿದ್ಧಪಡಿಸಲಾಗುತ್ತಿದ್ದು, ಆಗಸ್ಟ್ 5 ರೊಳಗೆ ಘೋಷಿಸಲಾಗುವುತ್ತದೆ ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಾರಿ ಅರ್ಹತಾ ಪಟ್ಟಿಯನ್ನು ಘೋಷಿಸಿಲ್ಲ ಎಂದೂ ಅವರು ಹೇಳಿದ್ದಾರೆ.
ಒಟ್ಟು 70,004 ವಿದ್ಯಾರ್ಥಿಗಳು ಶೇ 95ಕ್ಕಿಂತಲೂ ಹೆಚ್ಚಿನ ಅಂಕ ಗಳಿಸಿದ್ದು, 1,50,152 ವಿದ್ಯಾರ್ಥಿಗಳು ಶೇ. 90ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿದ್ದಾರೆ.
ಫಲಿತಾಂಶವು ಮಂಡಳಿಯ ಅಧಿಕೃತ ವೆಬ್ಸೈಟ್ cbseresults.nic.in ನಲ್ಲಿ ಲಭ್ಯವಾಗಲಿದ್ದು, digilocker.gov.in ಮತ್ತು ಮೊಬೈಲ್ನಲ್ಲಿರುವ ಡಿಜಿಲಾಕರ್ ಅಪ್ಲಿಕೇಷನ್ನಲ್ಲೂ ಫಲಿತಾಂಶಗಳನ್ನು ನೋಡಬಹುದು.