ಬೆಂಗಳೂರು, ಜು.30 (DaijiworldNews/HR): ರಾಜ್ಯದಲ್ಲಿಂದು ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಕೊಂಚ ಕಡಿಮೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 1890 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 34 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಸಾಂಧರ್ಭಿಕ ಚಿತ್ರ
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 1890 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು,23,478 ಸಕ್ರಿಯ ಪ್ರಕರಣಗಳು ಇವೆ.
ಇನ್ನು 1631 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಬಿಡುಗಡೆಯಾದ ಸೋಂಕಿತರ ಸಂಖ್ಯೆ 2843110ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 1,45,197 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ಶೇಕಡ 1.30 ರಷ್ಟು ಇದೆ.