ನವದೆಹಲಿ, ಜು. 30 (DaijiworldNews/SM): ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿ ವಿಚಾರದ ಸಂಬಂಧ ಚರ್ಚೆ ನಡೆಸಿದರು.
ನೂತನ ಸಿಎಂ ಆಗಿ ಆಯ್ಕೆಯಾದ ಎರಡೇ ದಿನಗಳಲ್ಲಿ ಬೊಮ್ಮಾಯಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು. ಅಲ್ಲದೆ, ಸಂಪುಟ ರಚನೆಯ ಬಗ್ಗೆಯೂ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
ಮತ್ತೊಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು.