ಗುವಾಹಟಿ, ಜು 31 (DaijiworldNews/PY): ಅಸ್ಸಾಂ ರಾಜ್ಯದ ಸಿಎಂ ಹಿಮಾಂತ ಬಿಸ್ವ ಶರ್ಮಾ ಹಾಗೂ ಆರು ಮಂದಿ ಸರ್ಕಾರಿ ಅಧಿಕಾರಿಗಳ ವಿರಿದ್ದ ಗಡಿ ಹಿಂಸಾಚಾರ ಪ್ರಕರಣ ಸಂಬಂಧ ಮಿಜೋರಾಂ ರಾಜ್ಯದ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಅಸ್ಸಾಂ-ಮಿಜೋರಾಮ್ ಅಂತರ್ ರಾಜ್ಯ ಗಡಿ ಪ್ರದೇಶದಲ್ಲಿ ಜುಲೈ 26ರಂದು ನಡೆಸ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಸಿಎಂ, ಆರು ಮಂದಿ ಹಿರಿಯ ಅಧಿಕಾರಿಗಳು ಸೇರಿದಂತೆ 200 ಮಂದಿ ಪೊಲೀಸರ ವಿರುದ್ಧ ವಿಜೋರಾಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ವಿಭಾಗೀಯ ಅರಣ್ಯ ಅಧಿಕಾರಿ ಸನ್ನಿಡಿಯೋ ಚೌಧರಿ, ಉಪ ಐಜಿಪಿ ದೇವ್ ಜ್ಯೋತಿ ಮುಖರ್ಜಿ, ಧೋಲೈ ಪೊಲೀಸ್ ಠಾಣಾಧಿಕಾರಿ ಸಾಹಬ್ ಉದ್ದೀನ್, ಡಿಐಜಿ ಅನುರಾಗ್ ಅಗರ್ವಾಲ್, ಎಸ್ಪಿ ವೈಭವ್ ಚಂದ್ರಶೇಖರ್ ನಿಂಬಾಳ್ಕರ್ ಹಾಗೂ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೀರ್ತಿ ಜಲ್ಲಿ ಅವರ ವಿರುದ್ದ ಎಫ್ಐಆರ್ ದಾಖಲಾಗಿದೆ ಎನ್ನಲಾಗುತ್ತಿದೆ.
ಗಡಿಯಲ್ಲಿ ಕಳೆದ ಒಂದು ವಾರದಿಂದ ಹಿಂಸಾಚಾರ ನಡೆಯುತ್ತಿದೆ. ಉಭಯ ರಾಜ್ಯಗಳ ಗಡಿಯಲ್ಲು ಜುಲೈ 26ರಂದು ನಡೆದ ಹಿಂಸಾಚಾರದಲ್ಲಿ ಆರು ಮಂದಿ ಪೊಲೀಸರ ಹಾಗೂ ಓರ್ವ ನಾಗರೀಕ ಸಾವನ್ನಪ್ಪಿದ್ದರು.
2020ರ ಆಗಸ್ಟ್ನಲ್ಲಿ ಉಂಟಾದ ಸಂಘರ್ಷದ ಸಂದರ್ಭ ಮಿಜೋರಾಂ ಗಡಿಯಲ್ಲಿರುವ ಗುಡಿಸಲುಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದರು.