ಬೆಂಗಳೂರು, ಜು 31(DaijiworldNews/MS): ನೆರೆಯ ರಾಜ್ಯವಾಗಿರುವ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಈ ರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸುವರಿಗಾಗಿ ಹೊಸ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಹೊರಡಿಸಿದ್ದು ಕೋವಿಡ್ 19 ಲಸಿಕೆಯ ಎರಡೂ ಡೋಸ್ಗಳನ್ನು ಪಡೆದಿದ್ದರೂ ಅಥವಾ ಪಡೆಯದಿದ್ದರೂ 72 ಗಂಟೆಗಳ ಒಳಗೆ ಮಾಡಿಸಿರುವ ಆರ್ ಟಿ - ಪಿಸಿಆರ್ ಪರೀಕ್ಷೆಯ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯಗೊಳಿಸಲಾಗಿದೆ.
ವಿಮಾನ, ರೈಲು, ಬಸ್, ಟ್ಯಾಕ್ಸಿ, ಸ್ವಂತ ವಾಹನದ ಮೂಲಕ ಕರ್ನಾಟಕಕ್ಕೆ ಆಗಮಿಸುವ ಜನರು 72 ಗಂಟೆಗಳ ಮೊದಲ ಆರ್ಟಿಪಿಸಿಆರ್ ನೆಗೆಟಿವ್ ವರದಿ ಹೊಂದುವುದು ಕಡ್ದಾಯವಾಗಿದೆ. ವಿಮಾನಯಾನ ಸಂಸ್ಥೆಗಳು 72 ಗಂಟೆಗಳ ಒಳಗೆ ಮಾಡಿಸಿದ ಆರ್ಟಿಪಿಸಿಆರ್ ನೆಗೆಟಿವ್ ವರದಿಯನ್ನು ಪ್ರಮಾಣ ಪತ್ರ ಹೊಂದಿರುವ ಜನರಿಗೆ ಮಾತ್ರ ಬೋರ್ಡಿಂಗ್ ಪಾಸ್ ನೀಡಬೇಕು ಎಂದು ತಿಳಿಸಿದೆ.
ರೈಲ್ವೆ ಪ್ರಾಧಿಕಾರವು ರೈಲಿನಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು ನೆಗೆಟಿವ್ ವರದಿ ಹೊಂದಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದೆ. ಬಸ್ಗಳ ಮೂಲಕ ಬರುವ ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿಸಿದ ಆರ್ಟಿಪಿಸಿಆರ್ ನೆಗೆಟಿವ್ ವರದಿ ಪಡೆದ ಪ್ರಮಾಣ ಪತ್ರ ಹೊಂದಿರುವುದನ್ನು ನಿರ್ವಾಹಕರು ಖಚಿತಪಡಿಸಿಕೊಳ್ಳಬೇಕು
ಇನ್ನು ಕೇರಳದಿಂದ ಕರ್ನಾಟಕಕ್ಕೆ ವಿದ್ಯಾಭ್ಯಾಸ. ಕಛೇರಿ ಕೆಲಸ, ವ್ಯಾಪಾರ - ವ್ಯವಹಾರ ಸೇರಿದಂತೆ, ಇತರ ಕಾರಣಗಳೆ ದೈನಂದಿನವಾಗಿ' ಭೇಟ ನೀಡುವವರು ಪ್ರತಿ 15 ದಿನಗಳಗೊಮ್ಮೆಆರ್ ಟಿ - ಪಿಸಿಆರ್ ಪರೀಕ್ಷೆಯ ನೆಗೆಟವ್ ಪ್ರಮಾಣ ಪತ್ರ ಹೊಂದಿರಬೇಕು.
ಕೇರಳದಿಂದ ತುರ್ತು ಸಂದರ್ಭಗಳಿಗೆ ಆಗಮಿಸುವ ಮಂದಿಗೆ , ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗೆ, ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಆರ್ ಟಿ - ಪಿಸಿಆರ್ ಪರೀಕ್ಷೆಯ ನೆಗೆಟವ್ ವರದಿಯ ನಿಯಮದಿಂದ ವಿನಾಯಿತಿ ನೀಡಲಾಗಿದೆ
ಈ ಎಲ್ಲಾ ನಿಯಮಗಳ ಅನುಪಾಲನೆಗೆ ಚೆಕ್ ಪೋಸ್ಟ್ಗಳನ್ನು ಸ್ಥಾಪನೆ ಹಾಗೂ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ಆಯಾ ಜಲ್ಲಾಧಿಕಾರಿಗಳಿಗೆ ವಹಿಸಿದೆ.