ಬೆಂಗಳೂರು, ಆ 01 (DaijiworldNews/PY): "ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ಹೆಜ್ಜೆಗೂ ಯುವ ಜನತೆಗೆ ಸ್ಪೂರ್ತಿ ತುಂಬುತ್ತಿದ್ದಾರೆ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನ ಸೌಧ ಮುಂಭಾಗದಲ್ಲಿ ಭಾರತೀಯ ಜನತಾ ಯುವ ಮೋರ್ಚಾ ಆಯೋಜಿಸಿದ್ದ ಒಲಿಂಪಿಕ್ನಲ್ಲಿ ಪಾಲ್ಗೊಂಡಿರುವ ದೇಶದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಸೈಕಲ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, "ಪ್ರಧಾನಿ ಮೋದಿ ಅವರು ಪ್ರತಿಯೊಂದು ವಿಚಾರಕ್ಕೂ ಸೂಕ್ಷ್ಮವಾಗಿ ಸ್ಪಂದಿಸುತ್ತಿದ್ದು, ಪ್ರತಿ ಹೆಜ್ಜೆಗೂ ಯುವ ಜನತೆಗೆ ಸ್ಪೂರ್ತಿ ತುಂಬುತ್ತಿದ್ದಾರೆ" ಎಂದಿದ್ದಾರೆ.
"ಯುವ ಜನತೆ ದೇಶದ ಶಕ್ತಿ ಹಾಗೂ ಭವಿಷ್ಯವಾಗಿದ್ದು, ಶಿಸ್ತಿನಿಂದ ಒಳ್ಳೆಯ ನಡವಳಿಕೆ ರೂಪುಗೊಳ್ಳುತ್ತದೆ. ನಾನು ಸಿಎಂ ಆದ ಬಳಿಕ ಮೊದಲ ಬಾರಿಗೆ ಯುವ ಸಮೂಹ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಯುವಜನತೆಗೆ ನನ್ನ ಮುಂದಿ ಕಾರ್ಯಕ್ರಮಗಳಲ್ಲಿ ಪ್ರಾಶಸ್ತ್ಯ ಸಿಗಲಿದೆ" ಎಂದು ಹೇಳಿದ್ದಾರೆ.
"ಪ್ರಧಾನಿ ಮೋದಿ ಅವರು ಖೇಲೋ ಇಂಡಿಯಾ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ಆದ್ಯತೆ ನೀಡಿದ್ದು, ಜೀತೋ ಇಂಡಿಯಾ ಎಂದು ಹೇಳುವ ಮುಖೇನ ಕ್ರೀಡಾಪಟುಗಳಿಗೆ ಹುರಿದುಂಬಿಸಿದ್ದಾರೆ. ಇದರ ಭಾಗವಾಗಿ ದೇಶದಾದ್ಯಂತ ನಡೆಯುತ್ತಿರುವ ಸೈಕಲ್ ರ್ಯಾಲಿಯಲ್ಲಿ56,000 ಯುವ ಜನತೆ ಭಾಗಹಿಸುತ್ತಿದ್ದಾರೆ" ಎಂದಿದ್ದಾರೆ.