ನವದೆಹಲಿ, ಆ.01 (DaijiworldNews/HR): 49.49 ಕೋಟಿ ಡೋಸ್ ಕೊರೊನಾ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಸಾಂಧರ್ಭಿಕ ಚಿತ್ರ
ಕೇಂದ್ರ ಸರ್ಕಾರವು ಈವರೆಗೆ ರಾಜ್ಯಗಳಿಗೆ 49,49,89,550 ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಅದರಲ್ಲಿ ತ್ಯಾಜ್ಯಗಳು ಸೇರಿದಂತೆ ಒಟ್ಟು 46,70,26,662 ಪ್ರಮಾಣದಷ್ಟು ಲಸಿಕೆಗಳು ಬಳಕೆಯಾಗಿದ್ದು, ಮುಂದಿನ ದಿನಗಳಲ್ಲಿ 8,04,220 ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಇನ್ನು ಭಾರತದಲ್ಲಿ ತಯಾರಿಸಿದ ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಜನವರಿ 16 ರಂದು ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದರು.
ಭಾರತದಲ್ಲಿ ಇಲ್ಲಿಯವರೆಗೂ ಒಟ್ಟಾರೆ 47,02,98,596 ಮಂದಿಗೆ ಕೊರೊನಾ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ.