ನವದೆಹಲಿ, ಆ 01 (DaijiworldNews/PY): ಮಣಿಪುರದ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ಗೋವಿಂದದಾಸ್ ಕೊಂತೌಜಮ್ ಅವರು ಭಾನುವಾರ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡಿದ್ದಾರೆ.
ಭಾನುವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಹಾಗೂ ಬಿಜೆಪಿ ಹಿರಿಯ ನಾಯಕ ಸಂಬಿತ್ ಪಾತ್ರ ಅವರ ಸಮ್ಮುಖದಲ್ಲಿ ಮಣಿಪುರ ಸಿಎಂ ಎನ್ ಬಿರೆನ್ ಸಿಂಗ್ ಅವರು ಬಿಜೆಪಿಗೆ ಸೇರ್ಪಡೆಯಾದರು.
ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಪ್ರಧಾನಿ ನರೇಂದ್ರ ಮೋದಿ ಅವರು ಈಶಾನ್ಯ ಭಾರತದ ಏಳಿಗೆಗಾಗಿ ಕಾಳಜಿ ವಹಿಸಿದ್ದಾರೆ. ಇತ್ತೀಚೆಗೆ ಕೇಂದ್ರ ಸಂಪುಟಕ್ಕೆ ಇಲ್ಲಿನ ಐವರು ನಾಯಕರನ್ನು ಸೇರ್ಪಡೆ ಮಾಡಿದ್ದಾರೆ. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಮಣಿಪುರ ಅಭಿವೃದ್ದಿಯಾಗಲಿದೆ" ಎಂದು ಹೇಳಿದ್ದಾರೆ.