ಬೆಂಗಳೂರು, ಆ 02 (DaijiworldNews/PY): ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ವಿ.ಪೊನ್ನುರಾಜ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿ.ಪೊನ್ನುರಾಜ್ ಅವರು ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ಇದೀಗ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿದ್ದ ಡಾ.ಎಸ್.ಸೆಲ್ವರಾಜ್ ಅವರನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ತೆರವಾಗಿದ್ದ ಮುಖ್ಯಮಂತ್ರಿಗಳ ಕಾರ್ಯದರ್ಶಿ ಹುದ್ದೆಗೆ ಪೊನ್ನುರಾಜ್ ವರ್ಗಾಯಿಸಿದ್ದು, ಮುಂದಿನ ಆದೇಶದವರೆಗೆ ಕೆಪಿಸಿಎಲ್ ವ್ಯವಸ್ಥಾಪಕ ಹುದ್ದೆಯಲ್ಲಿ ಮುಂದುವರಿಯುವಂತೆ ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.