ಬೆಂಗಳೂರು, ಅ 01 (DaijiworldNews/MS): ಶೈಕ್ಷಣಿಕ ವರ್ಷ ಯಾವಾಗ ಆರಂಭವಾಗಬಹುದು ಎಂಬ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟನೆ ನೀಡಿದ್ದು, ಪ್ರಸ್ತುತ ರಾಜ್ಯದಲ್ಲಿ ಶಾಲೆ ಆರಂಭದ ಕುರಿತಂತೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕೊರೋನಾ ಎರಡನೇ ಅಲೆಯ ತೀವ್ರತೆ ಕ್ರಮೇಣ ತಗ್ಗುತ್ತಿದ್ದರೂ, ಮೂರನೇ ಅಲೆ ಭೀತಿ ನಮ್ಮ ಮುಂದಿದೆ. ಹೀಗಾಗಿ ರಾಜ್ಯದಲ್ಲಿ ಖಾಸಗಿ ಶಾಲೆಗಳ ಆರಂಭದ ಕುರಿತು ಎಲ್ಲ ಆಯಾಮದಲ್ಲಿಯೂ ಚರ್ಚಿಸಿ ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟದ ಜೊತೆಯಲ್ಲಿ ಸೌಹಾರ್ದಯುತವಾಗಿ ಚರ್ಚಿಸಿ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.
ಶಾಲೆಗಳ ಆರಂಭ ಕುರಿತು ಬೇರೆ ಬೇರೆ ರಾಜ್ಯದಲ್ಲಿರುವ ಸ್ಥಿತಿಗತಿ ಮತ್ತು ನಮ್ಮ ರಾಜ್ಯದಲ್ಲಿ ಪರಿಸ್ಥಿತಿ ಯಾವ ರೀತಿ ಇದೆ. ವ್ಯಾಕ್ಸಿನೇಷನ್ ಯಾವ ರೀತಿ ಆಗಿದೆ. ಎಲ್ಲವನ್ನೂ ನೋಡಿಕೊಂಡು ಸೌಹಾರ್ದಯುವಾಗಿ ಚರ್ಚೆ ಮಾಡಿದ ನಂತರವೇ ಶಾಲೆಗಳ ಆರಂಭ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.