ಬೆಂಗಳೂರು,ಆ.02 (DaijiworldNews/HR): ಕೊರೊನಾದಿಂದಾಗಿ ಶಿಕ್ಷಣ ಇಲಾಖೆಯು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿ ಈಗಾಗಲೇ ದ್ವಿತೀಯ ಪಿಯುಸಿ ಫಲಿತಾಂಶ ಬಂದಿದ್ದು, ಕೆಲ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಫಲಿತಾಂಶವನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಾಂಧರ್ಭಿಕ ಚಿತ್ರ
ಕರ್ನಾಟಕದಲ್ಲಿ ಒಟ್ಟು 878 ವಿದ್ಯಾರ್ಥಿಗಳು ಪಿಯುಸಿ ಫಲಿತಾಂಶ ಸಮಾಧಾನ ತಂದಿಲ್ಲ ಎಂದು ತಿರಸ್ಕಾರ ಮಾಡಿರುವುದಾಗಿ ವರದಿಯಾಗಿದೆ.
ಬಳ್ಳಾರಿ ಜಿಲ್ಲೆಯ 221 ಫ್ರೆಶರ್ಸ್ ಹಾಗೂ 16 ರಿಪೀಟರ್ಸ್ ಫಲಿತಾಂಶವನ್ನು ತಿರಸ್ಕಾರ ಮಾಡಿದ್ದು, ಇದರಲ್ಲಿ ಕೊಟ್ಟೂರು ಇಂದು ಪಿಯು ಕಾಲೇಜಿನ 104 ವಿದ್ಯಾರ್ಥಿಗಳು ತಮ್ಮ ಫಲಿತಾಂಶದ ಬಗ್ಗೆ ಅಸಮಧಾನಗೊಂಡಿದ್ದಾರೆ ಎನ್ನಲಾಗಿದೆ.
ಇನ್ನು ಕರ್ನಾಟಕದ ವಿವಿಧ ಭಾಗದ ವಿದ್ಯಾರ್ಥಿಗಳು ಕೂಡ ಈ ಫಲಿತಾಂಶವನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದು ಬಂದಿದೆ.