ನವದೆಹಲಿ, ಆ.02 (DaijiworldNews/HR): ಆಗಸ್ಟ್ ಎರಡನೇ ವಾರದಲ್ಲಿ ದೇಶದಾದ್ಯಂತ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ.
ಸಾಂಧರ್ಭಿಕ ಚಿತ್ರ
ಆಗಸ್ಟ್ ಎರಡನೇ ವಾರದಿಂದ ದೇಶದಾದ್ಯಂತ ದಿನವೊಂದಕ್ಕೆ ಒಂದುವರೆಲಕ್ಷ ಹೊಸ ಕೊರೊನಾ ಪ್ರಕರಣ ಪತ್ತೆಯಾಗುವ ಸಾಧ್ಯತೆ ಇದ್ದು, ಇದು ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ತಂದೊಡ್ಡಬಹುದೆಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ಈ ಮಾಹಿತಿಯನ್ನು ಹೈದರಬಾದ್ ಹಾಗೂ ಕಾನ್ಪುರ ಮೂಲದ ಇಂಡಿಯನ್ ಇನ್ಸ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಂಶೋಧಕಾರದ ಮತುಕುಮಲ್ಲಿ ವಿದ್ಯಾಸಗರ್ ಹಾಗೂ ಮಣೀಂದ್ರ ಅಗರ್ ವಾಲ್ ನೇತೃತ್ವದಲ್ಲಿ ನಡೆದ ಅಧ್ಯಯನದಲ್ಲಿ ನೀಡಲಾಗಿದೆ.
ಇನ್ನು ಈ ಹಿಂದೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ಸಾಂಕ್ರಾಮಿಕ ರೋಗಗಳ ಮುಖ್ಯಸ್ಥ ಡಾ. ಸಮೀರನ್ ಪಾಂಡಾ, ಕೊರೊನಾ ಮೂರನೇ ಅಲೆ ಬಹುಶಃ ಆಗಸ್ಟ್ ಅಂತ್ಯದ ವೇಳೆಗೆ ಸಂಭವಿಸಬಹುದು ಎಂದು ಹೇಳಿದ್ದರು.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸ ಸೋಂಕಿನ ಪ್ರಮಾಣ ಹಾಗೂ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದ್ದು, ಒಟ್ಟು 40,134 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನಿಂದ ಕಳೆದ 24ಗಂಟೆಗಳಲ್ಲಿ 422 ಮಂದಿ ಸಾವನ್ನಪ್ಪಿದ್ದಾರೆ.